ಮಹಿಳಾ ಸ್ವ ಸಂಘ ಉತ್ಪನ್ನಗಳ ಮಾರಾಟಕ್ಕೆ ರಾಜ್ಯದ 5 ಸ್ಥಳಗಳಲ್ಲಿ ಶಾಶ್ವತ ಪ್ರದರ್ಶನ ಮಾರಾಟ ಮಳಿಗೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ಸರದಾರ ಮೈದಾನದಲ್ಲಿ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಸಹಯೋಗದೊಂದಿಗೆ ಮಹಿಳಾ ಸ್ವ-ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ದಿಮೆ ಯೋಜನೆಯ ಸಮುದಾಯ ಉದ್ಯಮ ನಿಧಿ ವಿತರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ಯೋಜನೆ ಮೂಲಕ ದೇಶದ ಅಭಿವೃಧ್ದಿ ಮಾಡುತ್ತಿರುವುದು ನಮ್ಮ ತಾಯಂದಿರು ಮೌಲ್ಯಮಾಪನವಾಗಬೇಕು.ಸ್ತ್ರಿ ಸಾಮರ್ಥ್ಯ ಅನುಷ್ಠಾನಕ್ಕಾಗಿ ಅಯವ್ಯಯದಲ್ಲಿ ರೂ. 1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ.ಮಹಿಳೆಯರು ನಿರ್ವಹಿಸುವ ಮನೆ ಕೆಲಸ ಹಾಗೂ ಸೇವೆ ಸಾಮಾನ್ಯವಾದುದಲ್ಲ. ಮಹಿಳೆಯರ ಶ್ರಮಕ್ಕೆ ಯಾರೂ ಬೆಲೆ ನೀಡುವುದಿಲ್ಲ. ಮನೆ ಕೆಲಸ ಮಾಡುವ ಮಹಿಳೆಯರಿಗೂ ಗೌರವ ಸಿಗಬೇಕು. ಅವರ ಕೆಲಸಕ್ಕೆ ಆದಾಯ ಬರಬೇಕು ಎಂದು ಹೇಳಿದರು.
ಕರಕುಶಲತೆ ಭಾರತೀಯ ನಾರಿಯರಿಗೆ ದೇವರು ಕೊಟ್ಟ ವರ. ಇದಕ್ಕೆ ಮಾರುಕಟ್ಟೆ ಒದಗಿಸಲು ಪ್ರದರ್ಶನ ಮೇಳ ಆಯೋಜಿಸಲಾಗಿದೆ. ಆನ್‍ಲೈನ್ ಮಾರುಕಟ್ಟೆಗೆ ಮಹಿಳಾ ಸಂಘಗಳನ್ನು ಜೋಡಿಸಲು ಚಿಂತನೆ ನಡೆಸಲಾಗಿದೆ. ಮಹಿಳಾ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತಿರಿಸುವ ಕೆಲಸ ಮಾಡಲಗುವುದು.ಶಾಸಕ ಅನಿಲ ಬೆನಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆಳಗಾವಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯನ್ನು ಹಂಚಿಕೊಂಡಿದ್ದು, ಬೆಳಗಾವಿಯಲ್ಲಿ ಶಾಶ್ವತ ಪ್ರದರ್ಶನ ಹಾಗೂ ಮಾರುಕಟ್ಟೆ ಸ್ಥಾಪಿಸಲು ಮುಖ್ಯಮಂತ್ರಿಗಳಲ್ಲಿ ಕೋರಿದರು.
ಸ್ತ್ರಿ ಸಾಮರ್ಥ್ಯ ಅನುಷ್ಠಾನಕ್ಕಾಗಿ ಅಯವ್ಯಯದಲ್ಲಿ ರೂ. 1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ ಪ್ರಾಸ್ತಾವಿಕ ಮಾತನಾಡಿ ಈ ಮೆಳದಲ್ಲಿ 160 ಮಳಿಗೆ ಸ್ಥಾಪಿಸಲಾಗಿದೆ. ಆಹಾರ ಮಳಿಗೆಗಳನ್ನು ತೆರೆಯಲಾಗಿದೆ. ಮಹಿಳೆಯ ಅಭಿವೃದ್ದಿಗಾಗಿ ಸ್ತ್ರೀ ಸಾಮಥ್ರ್ಯ ಯೋಜನೆಯಡಿ ರೂ. 500 ಕೋಟಿ ಅನುದಾನ ಒದಗಿಸಲಾಗಿದೆ. ಇದರಿಂದ 50 ಸಾವಿರ ಮಹಿಳಾ ಕುಟುಂಬಗಳಿಗೆ ಒಳಿತಾಗಲಿ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy