ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆಯಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ.
ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


