ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಆರ ಪಿ ಐ ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಆರ. ಪಿ .ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ವೆಂಕಟ ಸ್ವಾಮಿ ಮಾತನಾಡುತ್ತಾ ಬೆಳಗಾವಿ ಹಾಗೂ ಕರ್ನಾಟಕದಲ್ಲಿ ಆರ ಪಿ ಐ ಪಕ್ಷ ಒಂದು ಭೀಮ ಶಕ್ತಿ ಯಾಗಿ ಹೊರ ಹೊಮ್ಮುತ್ತಿದೆ ಎಂದರು.
2023ರ ಚುನಾವಣೆಯ ಮುಂಚಿತವಾಗಿ ನಾವು ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಅದರ ಅಂಗವಾಗಿ ಬೆಳಗಾವಿಯಲ್ಲಿ ಮಾಜಿ ಕಾರ್ಪೊರೇಟರ್ ಹಾಗೂ ಜನಸೇವಕರಾದ ಶಿವ ಲಿಂಬುಜಿ ಚೌಗುಲೆ .ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಅವರಿಗೆ ನಾವು ಜಿಲ್ಲಾ ಉಸ್ತುವಾರಿ ಹಾಗೂ ಚುನಾವಣೆಯ ಮಹತ್ವದ ಜವಾಬ್ದಾರಿಗಳನ್ನು ಶಿವ ಲಿಂಬುಜಿ ಚೌಗುಲೆ ಅವರಿಗೆ ನೀಡಲಿದ್ದೇವೆ.
ಇದೇ ವೇಳೆ ಮಾತನಾಡುತ್ತಾ ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟದಲ್ಲಿ ನಾವಿದ್ದು ನಮ್ಮ ರಾಜ್ಯಾಧ್ಯಕ್ಷರಾದ ರಾಮದಾಸ್ ಸಟೋಲೆ ಮಂತ್ರಿ ಕೂಡ ಇದ್ದಾರೆ.
2023ರ ಚುನಾವಣೆಯಲ್ಲಿ ನಾವು ಭಾರತೀಯ ಜನತಾ ಪಕ್ಷದ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲಿದ್ದೇವೆ. ನಮ್ಮ ಸ್ಪಷ್ಟವಾದ ಉದ್ದೇಶ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಕೂಡದು ಜೆ ಡಿ ಎಸ್ ಮತ್ತು ಕಾಂಗ್ರೆಸ್ ಮೈತ್ರಿ ಆಗಬಾರದು.
ಈ ಆಧಾರ ಮೇಲೆನಾವು ರಾಜ್ಯದಲ್ಲಿ ರಾಜಕೀಯ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಮಹಿಳಾ ಮುಖಂಡರುಗಳಾದ ದಿಲ್ಶಾದ್ ತಹಶೀಲ್ದಾರ್ ಭಾರತೀ ದಿವಾನ್ ಶೇಕ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಹನುಮಂತ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


