ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ರಾಜ್ಯಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು ಇದೀಗ ಮತ್ತೆ ಫೆಬ್ರವರಿ 6 ರಂದು ಆಗಮಿಸಲಿದ್ದಾರೆ.
ಕಳೆದ ಎರಡ್ಮೂರು ದಿನಗಳ ಹಿಂದಷ್ಟೆ ಕಲ್ಬುರ್ಗಿ ಯಾದಗಿರಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಫೆಬ್ರವರಿ 6 ರಂದು ತುಮಕೂರು ಧಾರವಾಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಧಾರವಾಡ ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ತುಮಕೂರಿನ ಗುಬ್ಬಿ ಬಳಿಯ ಹೆಚ್ ಎಎಲ್ ಹೆಲಿಕಾಪ್ಟರ್ ಘಟಕವನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಲಕ್ಷಾಂತರ ಜನರನ್ನ ಸೇರಿಸಲು ಬಿಜೆಪಿ ಪ್ಲಾನ್ ರೂಪಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


