ಕೋಲಾರ: ಚುನಾವಣೆಯಲ್ಲಿ ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಜೈಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಬಿಜೆಪಿ ಸರ್ಕಾರ ಇದೆ. ಮೇ 10ರಂದು ಚುನಾವಣೆ ನಡೆಯಲಿದೆ. ರಾಜ್ಯದ ನೆಲ, ಜಲ, ಭಾಷೆಯನ್ನು ಯಾರು ರಕ್ಷಣೆ ಮಾಡುತ್ತಾರೆ ಅಂತ ನೀವು ವಿಚಾರ ಮಾಡಿ ಎಂದು ಹೇಳಿದರು.
ಮೋದಿ 9 ವರ್ಷದಿಂದ ಅಧಿಕಾರ ಮಾಡುತ್ತಿದ್ದಾರೆ. ಈ 5 ವರ್ಷದಲ್ಲಿ ರಾಜ್ಯದಲ್ಲಿ 3 ಜನ ಸಿಎಂ ಆದರು. ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದರು. ಮೋದಿ ಅವರು ಬೊಮ್ಮಾಯಿ ಅವರು ಡಬಲ್ ಎಂಜಿನ್ ಸರ್ಕಾರ ಅಂತಾರೆ. ಎರಡು ಕಡೆ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗುತ್ತದೆ ಅಂತಾರೆ. ಆದರೆ ಡಬಲ್ ಎಂಜಿನ್ ಸರ್ಕಾರ ಬಂದ ಮೇಲೆ ರಾಜ್ಯ ಕೆಟ್ಟ ಹೆಸರು ತೆಗೆದುಕೊಂಡಿದೆ ಎಂದು ಕಿಡಿಕಾರಿದರು.
ರಾಜ್ಯದ ಗೌರವವನ್ನು, ಮಾನ ಮರ್ಯಾದೆಯನ್ನು ಕಾಂಗ್ರೆಸ್ ಅವರು ಹಾಳು ಮಾಡಿದ್ದಾರೆ ಎಂದು ಬಾಯಿ ತಪ್ಪಿ ಹೇಳಿದ ಅವರು, 40% ಕಮಿಷನ್ ಹೊಡೆದಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿ ಬಂದಿಲ್ಲ ಅಂತ ಜನ ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


