nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವರಾಜ ಬೊಮ್ಮಾಯಿ‌ ಚೊಚ್ಚಲ ಬಜೆಟ್ ಮೇಲೆ ಅಪಾರ ನಿರೀಕ್ಷೆಗಳು
    ರಾಜ್ಯ ಸುದ್ದಿ March 4, 2022

    ಬಸವರಾಜ ಬೊಮ್ಮಾಯಿ‌ ಚೊಚ್ಚಲ ಬಜೆಟ್ ಮೇಲೆ ಅಪಾರ ನಿರೀಕ್ಷೆಗಳು

    By adminMarch 4, 2022No Comments2 Mins Read
    bommai

    ರಾಜ್ಯ ಬಿಜೆಪಿಯಲ್ಲಿನ ಅನಿಶ್ಚಿತತೆ, ಪ್ರತಿಪಕ್ಷ ಕಾಂಗ್ರೆಸಿನ ಪ್ರಖರತೆ ಹಾಗೂ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು‌ (Assembly Elections) ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಮತೋಲನದ ಬಜೆಟ್ (Balancing Budget) ಮಂಡಿಸುವುದು ಸವಾಲಿನ ಕೆಲಸವಾಗಿದೆ.

    ಇದರ ನಡುವೆ ಕೋವಿಡ್, ಆರ್ಥಿಕ ಹಿಂಜರಿತ, ವ್ಯಾಪರ-ವಹಿವಾಟುಗಳ ಕುಂಠಿತ, ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಜನ ಬಸವರಾಜ ಬೊಮ್ಮಾಯಿ‌ ಅವರ ಚೊಚ್ಚಲ ಬಜೆಟ್ ಅಪಾರ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ.


    Provided by
    Provided by

    ಉತ್ತರ ಕರ್ನಾಟಕಕ್ಕೆ ಹಲವು ಕೊಡುಗೆ ಸಾಧ್ಯತೆ:
    ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ‌ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ‌ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನೀಡುವ ನಿರೀಕ್ಷೆಯಿದೆ.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿದ್ದು ಅವುಗಳಿಗೆ ಬಜೆಟ್‌ನಲ್ಲಿ ಅಗತ್ಯ ಹಣ ನೀಡುವ ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ವಿಶೇಷ ಗಮನಹರಿಸುವ ನಿರೀಕ್ಷೆಯೂ ಇದೆ.ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ:
    ಬಿಬಿಎಂಪಿ ಚುನಾವಣೆ (BBMP Elections) ಬರುತ್ತಿದೆ ಮತ್ತು ಬಸವರಾಜ ಬೊಮ್ಮಾಯಿಯವರ ಬಳಿಯಲ್ಲೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಇದೆ.

    ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಏರಿಕೆ ಆಗಲಿದೆ. ಹೊಸದಾಗಿ ಬಿಬಿಎಂಲಿ ವ್ಯಾಪ್ತಿಗೆ ಸೇರುವ ಹಳ್ಳಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೊಡಲೇಬೇಕಾಗಿದೆ. ಆದುದರಿಂದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡುವ ನಿರೀಕ್ಷೆ ಇದೆ.ಬೊಮ್ಮಾಯಿ‌ ಬಜೆಟ್‌ನಲ್ಲಿ

    ಹಲವು ನಿರೀಕ್ಷೆಗಳು:

    ಬಿಪಿಎಲ್ ಪಡಿತರ ಕಾರ್ಡ್‌ದಾರರಿಗೆ (BPL Ration Card) 5 ಕೆ.ಜಿ‌. ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆ.ಜಿ ಅಕ್ಕಿ/ಧಾನ್ಯ ನೀಡಲಿದ್ದಾರೆ ಎಂಬ ನಿರೀಕ್ಷೆ ಇದೆ.

    ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ (Assembly Elections) ನಡೆಯಲಿದ್ದು ಸರ್ಕಾರಿ ನೌಕರರನ್ನು ಒಲಿಸಿಕೊಳ್ಳಲು 7ನೇ ವೇತನ ಆಯೋಗ ರಚನೆ ಮಾಡುವ ಘೋಷಣೆ ನಿರೀಕ್ಷೆ ಇದೆ.

    ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜನಪ್ರಿಯವಾಗಲು ಕಾರಣವಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ರಾಜ್ಯದಲದಲೂ ಘೋಷಿಸುವ ನಿರೀಕ್ಷೆ ಇದೆ.

    ಬಸವರಾಜ ಬೊಮ್ಮಾಯಿ (Basavaraja Bommai) ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದರು. ನೀರಾವರಿ ಅವರ ಆಸಕ್ತಿಯ ಕ್ಷೇತ್ರ. ಹಾಗಾಗಿ ತಮ್ಮ ಬಜೆಟ್‌ನಲ್ಲಿ ನೀರಾವರಿಗೆ ಹೆಚ್ಚು ಒತ್ತು ಕೊಡಬಹುದು ಎಂಬ ನಿರೀಕ್ಷೆ ಇದೆ.ಸದ್ಯ ಸರ್ಕಾರದ ವರ್ಚಸ್ಸು ಕಾಪಾಡಿಕೊಳ್ಳಬೇಕಾದರೆ ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ, ಉದ್ಯೋಗಸೃಷ್ಠಿಗೆ ಒತ್ತು ನೀಡಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಯೋಜನೆಗಳು ಘೋಷಣೆ ಆಗಬಹುದು ಎಂಬ ನಿರೀಕ್ಷೆ ಇದೆ.

    ಜನ ಬೆಲ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯೇ ಮೂಲ ಕಾರಣವಾಗಿದೆ. ಆದುದರಿಂದ ಪೆಟ್ರೋಲ್ ಮತ್ತು ಡೀಸಲ್ ಮೇಲೆ ಸೆಸ್ ಕಡಿತ ಮಾಡುವ ನಿರೀಕ್ಷೆ ಇದೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.