ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಶುಕ್ರವಾರ ನೇಮಕವಾಗಿದ್ದಾರೆ.
ರಾಜ್ಯದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಕಮಿಷನರ್ ಆಗಿದ್ದ ವಂದಿತಾ ಶರ್ಮಾ ಅವರಿಗೆ ಪದೋನ್ನತಿ ನೀಡಲಾಗಿದೆ. ಮೇ 31 ಕ್ಕೆ ಪಿ.ರವಿಕುಮಾರ್ ನಿವೃತ್ತರಾಗಲಿದ್ದಾರೆ.
1986-ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಥೆರೇಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ಅವರ ನಂತರ ಈ ಸ್ಥಾನವನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ.
ವಂದಿತಾ ಶರ್ಮಾ ಅವರ ಪತಿ ಹಣಕಾಸು ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿಯಾಗಿದ್ದು, ಅವರ ಹೆಸರೂ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬಂದಿದೆ.
ವರದಿ: ಮುರುಳಿಧರನ್ ಆರ್ ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


