ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹಳೇ ಹುಬ್ಬಳ್ಳಿಯ ನುರಾನಿ ಪ್ಲಾಟ್‌ನಲ್ಲಿರುವ ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


