ಹಾಸನ: ರಾಜ್ಯದಲ್ಲಿ ಕುಮಾರಸ್ವಾಮಿಯವರ ಸರ್ಕಾರ ಹೋದ ಮೇಲೆ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಆಗುತ್ತಿರುವ ಕಿರುಕುಳ ನನಗೆ ತಿಳಿದಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಹಾಸನದ ಬೈಲಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕರ್ತರ ಮೇಲೆ 107 ಕೇಸ್ ದಾಖಲಿಸಿದ್ದಾರೆ. ಕೆಲವರು ಚುನಾವಣೆ ಸಂದರ್ಭದಲ್ಲಿ ಗಲಾಟೆ ಮಾಡಿ ಕಾರ್ಯಕರ್ತರನ್ನು ಜೈಲಿಗೆ ಕಳಿಸುವ ಅಥವಾ ಗಡಿಪಾರು ಮಾಡುವ ಹುನ್ನಾರ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಕೆಲವರು ದುಡ್ಡಿನಿಂದ ರೌಡಿಸಂ ಮಾಡಲು ಹೊರಟಿದ್ದಾರೆ. ನಿನ್ನೆ ಉಗನೆ ಗ್ರಾಮಕ್ಕೆ ಹೋಗಿದ್ದೆ. ಅಲ್ಲಿ ಜನ ನನ್ನ ಬಳಿ ರಕ್ಷಣೆ ಬೇಕು ಎಂದು ಹೇಳುತ್ತಾರೆ. ಈ ಕ್ಷೇತ್ರವನ್ನು ನಾನು ಸವಾಲಾಗಿ ಸ್ವೀಕರಿಸಿ ಮುನ್ನಡೆಸುವ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ತಿರ್ಮಾನ ಕೈಗೊಳ್ಳುತ್ತೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


