ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ರೈತರು ರಾಜ್ಯದಾದ್ಯಂತ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ.
ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz