nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಿಂದ ರಾಜ್ಯಸಭೆಗೆ ಪ್ರಿಯಾಂಕ ಪ್ರವೇಶ?
    ರಾಜ್ಯ ಸುದ್ದಿ May 16, 2022

    ರಾಜ್ಯದಿಂದ ರಾಜ್ಯಸಭೆಗೆ ಪ್ರಿಯಾಂಕ ಪ್ರವೇಶ?

    By adminMay 16, 2022No Comments2 Mins Read
    preyanka gandhi

    ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳಿಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಬಿರುಸಾಗಿದ್ದು, ಬಿಜೆಪಿ ಈಗಾಗಲೇ ಈ ಚುನಾವಣೆಗೆ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದೆ. ಕಾಂಗ್ರೆಸ್‌ನಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆದಿದ್ದು, ರಾಜ್ಯಸಭೆಗೆ ರಾಜ್ಯದಿಂದ ಗಾಂಧಿ ವಂಶದ ಕುಡಿ ಪ್ರಿಯಾಂಕಗಾಂಧಿ ಅವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಹೆಚ್ಚಿನ ಮುತುವರ್ಜಿ ತೋರಿದ್ದಾರೆ.

    ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ರಾಜ್ಯ ಕಾಂಗ್ರೆಸ್ ನಾಯಕರು ಉತ್ಸುಕರಾಗಿದ್ದು, ರಾಜ್ಯದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಗಾಂಧಿ ಅವರ ಮನವೊಲಿಕೆಗೂ ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ.

    ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸಕ್ತಿ ತೋರಿದ್ದು, ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್‌ನ ಚಿಂತನ-ಮಂಥನ ಸಮಾವೇಶದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಹುಲ್‌ಗಾಂಧಿ ಅವರ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ರಾಜ್ಯದ ಕೆಲ ಕಾಂಗ್ರೆಸ್ ನಾಯಕರ ಜತೆ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದರೆ ಪಕ್ಷಕ್ಕೆ ಉಂಟಾಗುವ ಅನುಕೂಲವಾಗಿ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
    ಪ್ರಿಯಾಂಕಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗಲು ಬಯಸಿದರೆ ತಮ್ಮ ಅಭ್ಯಂತರವೇನಿಲ್ಲ. ಪ್ರಿಯಾಂಕ ಅವರ ಮನವೊಲಿಸಿ ಎಂದು ರಾಹುಲ್‌ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ ಎನ್ನಲಾಗಿದೆ.

    ರಾಜ್ಯಸಭೆಗೆ ಜೂನ್ ೧೦ ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ ೩೧ ಕೊನೆಯ ದಿನವಾಗಿದೆ. ಶತಾಯಗತಾಯ ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ನಾಯಕರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಪ್ರಿಯಾಂಕಗಾಂಧಿ ಅವರು ಒಪ್ಪುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

    ಪರಿಷತ್ ಟಿಕೆಟ್‌ಗೆ ಪೈಪೋಟಿ ಜೂನ್ ೩ ರಂದು ನಡೆಯಲಿರುವ ವಿಧಾನಪರಿಷತ್‌ನ ೭ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಲು ಭಾರಿ ಪೈಪೋಟಿಯೇ ನಡೆದಿದೆ.

    ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಿರುವ ಬಲಾಬಲದ ಮೇಲೆ ಕಾಂಗ್ರೆಸ್ ೨ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಈ ಎರಡು ಸ್ಥಾನಗಳಿಗೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಮಾಜಿ ಸಭಾಪತಿ ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಾ ಅಮರ್‌ನಾಥ್, ಮಾಜಿ ಮೇಯರ್ ರಾಮಚಂದ್ರಪ್ಪ, ಹಾಲಿ ಸದಸ್ಯರಾದ ಆಲ್ಲಂ ವೀರಭದ್ರಪ್ಪ, ಆರ್.ಬಿ. ತಿಮ್ಮಾಪುರ ಇವರುಗಳು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.ಇನ್ನೆರಡು ಮೂರು ದಿನಗಳಲ್ಲಿ ಕಾಂಗ್ರೆಸ್ ನಾಯಕರು ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.