ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಎಲ್ಲರೂ ಮತದಾನ ಮಾಡುವಂತೆ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಈ ಬಾರಿ ಹೊಸದಾಗಿ 16,04,285 ಮತದಾರರು ಸೇರ್ಪಡೆಯಾಗಿದ್ದಾರೆ. ರಾಜ್ಯದಲ್ಲಿ 18ರಿಂದ 19 ವಯಸ್ಸಿನ 11,71,558 ಯುವ ಮತದಾರರಿದ್ದು, ಯುವಕರು 645140, ಯುವತಿಯರು 526237, ಇತರೆ 181 ಮತದಾರರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


