nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026
    Facebook Twitter Instagram
    ಟ್ರೆಂಡಿಂಗ್
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬ್ಬು ದರ ನಿಗದಿ ಒತ್ತಾಯಿಸಿ ಅ.27 ರಂದು ರಾಜ್ಯಾದ್ಯಂತ ರಸ್ತೆ ತಡೆ ಚಳವಳಿ: ಕುರುಬೂರು ಶಾಂತಕುಮಾರ್
    ರಾಜ್ಯ ಸುದ್ದಿ October 23, 2022

    ಕಬ್ಬು ದರ ನಿಗದಿ ಒತ್ತಾಯಿಸಿ ಅ.27 ರಂದು ರಾಜ್ಯಾದ್ಯಂತ ರಸ್ತೆ ತಡೆ ಚಳವಳಿ: ಕುರುಬೂರು ಶಾಂತಕುಮಾರ್

    By adminOctober 23, 2022No Comments2 Mins Read
    shantha kumar

    ಕಬ್ಬು ದರ ನಿಗದಿ ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

    ರಾಜ್ಯ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ದರ ನಿಗದಿಪಡಿಸಲು ಮಂತ್ರಿಗಳು ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ಮುಂದೂಡುತ್ತಿದ್ದಾರೆ. ಇದು ಕಬ್ಬು ಬೆಳೆದ ರೈತರಿಗೆ ಬಗೆದ ದ್ರೋಹವಾಗಿದೆ. ರಾಜ್ಯದ ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರು ಯಾವುದೇ ಎಂಎಲ್ಎ, ಎಂಪಿ ,ಮಂತ್ರಿಗಳು, ಈ ಬಗ್ಗೆ ಮಾತನಾಡದೆ ಇರುವುದು ಅನುಮಾನ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


    Provided by
    Provided by

    30 ಲಕ್ಷ ಕಬ್ಬು ಬೆಳೆಗಾರರ 40,000 ಕೋಟಿ ವೈಹಿವಾಟು ನಡೆಸುವ ಈ ಉದ್ಯಮ ಸರ್ಕಾರಕ್ಕೆ ಲಾಭ ತರುತ್ತಿಲ್ಲವೇ? 5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ರಾಜ್ಯದ ಗೃಹ ಸಚಿವರಿಗೆ ಹಾಗೂ ಎಂಪಿಗಳಿಗೆ ಕಬ್ಬು ಬೆಳೆಗಾರರ ಗೂಳಾಟ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

    ರಾಜ್ಯಸರ್ಕಾರ, ಜನಪ್ರತಿನಿಧಿಗಳನ್ನು ಎಚ್ಚರಿಸಲು 27ರಂದು ರಾಜ್ಯಾದ್ಯಂತ 11ರಿಂದ 1ಗಂಟೆ ತನಕ ರಸ್ತೆ ತಡೆ ಚಳುವಳಿ ನಡೆಸಲಾಗುತ್ತದೆ. 31ರಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳ ,ಕಚೇರಿ ಮುತ್ತಿಗೆ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದದ್ದಾರೆ.

    ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಗಳು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಕಬ್ಬು ಕಟಾವು 16 ತಿಂಗಳಾಗುತಿದೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋಮೀಟರ್ ಆಧಾರದ ದರ ಕಡಿತ ಮಾಡಬೇಕು, ಕಾನೂನು ಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಚೀಟಿಂಗ್ ಕೇಸ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸಕ್ಕರೆ ಉದ್ದಿಮೆ ಸಕ್ಕರೆ ಹಾಗು ಕಬ್ಬು ಬೇಸಾಯ ಸಂಪೂರ್ಣವಾಗಿ ಗಣಕೀಕರಣವಾಗಬೇಕು ಎಂಬುದು ರಾಜ್ಯ ಕಬ್ಬು ಬೆಳೆಗಾರ ಸಂಘ ಎಪ್ರಿಲ್ 26ರಂದು ಒತ್ತಾಯಿಸಲಾಗಿತ್ತು. ರೈತನ ಕಬ್ಬಿನ ನಾಟಿ ಒಪ್ಪಂದ, ಜೇಷ್ಠತೆ ಆಧಾರದ ಕಟಾವು ಅನುಮತಿ, ಕಬ್ಬಿನ ತೂಕ, ಕಬ್ಬಿನ ಹಣ ಪಾವತಿ, ಸಕ್ಕರೆ ಇಳುವರಿ, ಎಲ್ಲವೂ ಗಣಕೀಕರಣವಾಗಿ ರೈತರ ಮೊಬೈಲ್ ಆಪ್ ಮೂಲಕ ನೋಂದಾಯಿಸುವ ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು ಈಗ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವುದು ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

    ಜಿಲ್ಲಾಧ್ಯಕ್ಷರಾದ ಪಿ.ಸೋಮಶೇಖರ್, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್ ಇತರರು ಇದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಬೆಂಗಳೂರು:  ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ…

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.