ಬೆಂಗಳೂರು : ರಾಜ್ಯದಲ್ಲಿ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಸಂತೆ ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಚರ್ಮಗಂಟು ರೋಗದ ಕುರಿತು ಮುಂಜಾಗ್ರತಾ ಕ್ರಮವಾಗಿ ಕರಪತ್ರಗಳು, ಪೋಸ್ಟರ್, ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.
ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ, ಉಣ್ಣೆ, ಕಚ್ಚುವ ನೊಣಗಳು, ವೈರಾಣುಗಳಿಂದ ಜಾನುವಾರುಗಳಿಗೆ ಹರಡುತ್ತದೆ. ರೋಗ ಕಾಣಿಸಿಕೊಂಡ ಪ್ರದೇಶ ಹಾಗೂ ಸುತ್ತಮುತ್ತಲಿನ 5 ಕಿ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ರೋಗಪೀಡಿತ ರಾಸುಗಳಿಂದ ಆರೋಗ್ಯವಂತ ರಾಸುಗಳನ್ನು ಬೇರ್ಪಡಿಸಿ, ಕೂಡಲೇ ಸ್ಥಳೀಯ ಪಶು ವೈದ್ಯರು ಸಂಪರ್ಕಿಸಿ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


