ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ ಎಂದರು.
ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ,” ಎಂದು ಅವರು ವಿವಿರ ನೀಡಿದರು.
“ವಿವಿಧ ಉದ್ಯಮಿಗಳು 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ, ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
90 ದಿನಗಳೊಳಗೆ ಅನುಮೋದನೆ
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳನ್ನು ತೊಂಬತ್ತು ದಿನದೊಳಗೆ ಅನುಮೋದನೆ ನೀಡಲಾಗುವುದು. ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಮುಖ್ಯವಾಗಿ ಈ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದು ಅವರು ವಿವರಿಸಿದರು.
“ಬೆಂಗಳೂರಿನ ಆಚೆಗೆ ಕೈಗಾರಿಕೆಗಳನ್ನು ವಿಸ್ತರಿಸುವುದು ಈ ಜಾಗತಿಕ ಹೂಡಿಕೆದಾರರ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಸಮಾವೇಶದಲ್ಲಿ ಆಗಿರುವ ಒಟ್ಟು ಒಪ್ಪಂದಗಳ ಪೈಕಿ ಶೇ.90ರಷ್ಟು ಬೆಂಗಳೂರಿನ ಆಚೆ ಆಗುತ್ತಿದೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ,” ಎಂದು ಸಚಿವರು ಪ್ರಶಂಸಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿನ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


