ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್ ಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.
ವೀಕೆಂಡ್ ಕರ್ಫ್ಯೂ:
ದೇಶದಲ್ಲಿ ನೋಡ ನೋಡುತ್ತಿದ್ದಂತೆ ಕೊರೊನಾ ಮೂರನೇ ಅಲೆ ಅಬ್ಬರಿಸಲು ಶುರುಮಾಡಿದೆ. ದೆಹಲಿಯಲ್ಲಿ ಹೆಮ್ಮಾರಿ ಸೋಂಕು ಅಬ್ಬರಿಸುತ್ತಿದ್ದು, ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಡೆಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಶನಿವಾರ ಕರ್ಫ್ಯೂ ಹೇರಿ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ.
ಪಾದಯಾತ್ರೆ ನಿಲ್ಲಲ್ಲ:
ನಾವು ಪಾದಯಾತ್ರೆ ಮಾಡಿದ್ರೆ ಮಾತ್ರ ಕೊರೊನಾ ಬರುತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಅವರ ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಅವರು ನಮ್ಮ ಮೇಲೆ ನೂರು ಕೇಸ್ ಹಾಕಿದರು ನಾವು ಪಾದಯಾತ್ರೆ ಮಾಡೇ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ
ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಡಿ.ಕೆ.ಬ್ರದರ್ಸ್ ಅವರನ್ನ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy