ಮಂಡ್ಯ : ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ಇಂದು ಮತ್ತೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಿಂದ ಪುನಾರಂಭಗೊಳ್ಳಲಿದ್ದು, ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಆರಂಭವಾದ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕಲಿದ್ದಾರೆ. ಮಂಡ್ಯದ ಬೆಳ್ಳಾಳೆಯಿಂದ ಪಾದಯಾತ್ರೆ ಪ್ರಾರಂಭವಾಗಿದೆ. ರಾಹುಲ್ ಗಾಂಧಿ ಮತ್ತು ಜೊತೆ ಜೊತೆಗೆ ಹೆಜ್ಜೆ ಹಾಕಲಿದ್ದಾರೆ.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಿಂದ ವಾಟರ್‌ವುಡ್ ರೆಸಾರ್ಟ್ಗೆ ಬೋಟ್ ಮೂಲಕ ಪ್ರಯಾಣ ಬೆಳೆಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ .
ಯಾತ್ರೆ ಬೆಳಗ್ಗೆ 11 ಗಂಟೆಗೆ ಖಾರದ್ಯಾ ಕೆರೆ ತಲುಪಲಿದೆ. ಸಂಜೆ 4 ಗಂಟೆವರೆಗೆ ನಾಯಕರು ವಿಶ್ರಾಂತಿ ಪಡೆಯಲಿದ್ದು ಸಂಜೆ 4 ಗಂಟೆಗೆ ಭಾರತ್ ಜೋಡೋ ಯಾತ್ರೆ ಪುನಾರಂಭವಾಗುತ್ತೆ. ಸಂಜೆ 7ಕ್ಕೆ ಬ್ರಹ್ಮದೇವರ ಹಳ್ಳಿಗೆ ತಲುಪಿ ರಾತ್ರಿ ವಿಸ್ಡಮ್ ಶಾಲೆಯಲ್ಲಿ ಕಾಂಗ್ರೆಸ್ ನಾಯಕರು ವಾಸ್ತವ್ಯ ಹೂಡಲಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಯಾತ್ರೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


