ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಅವರು ಉದ್ಘಾಟಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಬರಲಿರುವ ಅವರು ಹೆಲಿಕಾಪ್ಟರ್ ಮೂಲಕ ನೆಲಮಂಗಲದಲ್ಲಿರುವ ಎಸ್ಡಿಎಂ ನಿಸರ್ಗ ಕೇಂದ್ರ ತಲುಪಲಿದ್ದಾರೆ.
ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆಯ ಮುಖ್ಯಸ್ಥರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕ್ಷೇಮವನವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಉಪಸ್ಥಿತರಿರಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz