ಶಾಂತಿಗೆ ಭಂಗ ಉಂಟು ಮಾಡುತ್ತಿರುವ ಆರ್.ಎನ್. ರವಿ ರಾಜ್ಯಪಾಲ ಹುದ್ದೆಗೆ ಅಯೋಗ್ಯರಾಗಿದ್ದು, ಕೂಡಲೇ ಅವರನ್ನು ಸೇವೆಯಿಂದ ಹಿಂಪಡೆಯಬೇಕು ಎಂದು ತಮಿಳುನಾಡಿನ ಡಿಎಂಕೆ ಪಕ್ಷ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ.
ಸಾರ್ವಜನಿಕ ಸೇವೆ ಮಾಡುವುದಕ್ಕಾಗಿ ಪ್ರಮಾಣ ವಚನ ಸ್ವೀಕರಿಸಿರುವ ಆರ್.ಎನ್. ರವಿ ಅದಕ್ಕೆ ತದ್ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಪ್ರಮಾಣ ವಚನ ಉಲ್ಲಂಘಿಸುತ್ತಿದ್ದಾರೆ ಎಂದು ಡಿಎಂಕೆ ಪತ್ರದಲ್ಲಿ ಆರೋಪಿಸಿದೆ.
ರಾಜ್ಯ ಸರಕಾರ ಅನುಮೋದಿಸಿದ ಕಾಯ್ದೆಗಳಿಗೆ ಅನುಮೋದನೆ ನೀಡದೇ ವಿಳಂಬ ಮಾಡುತ್ತಿದ್ದಾರೆ ಎಂದು ಡಿಎಂಕೆ ಸಂಸದರು ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ರಾಜ್ಯಪಾಲ ರವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


