ಬೆಂಗಳೂರು : ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಎಫೆಕ್ಟ್ ರಾಜ್ಯದ 9 ಜಿಲ್ಲೆಗಳಿಗೆ ತಟ್ಟಲಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30–40 ಕಿಮೀ ತಲುಪಬಹುದು ಎಂದು ಹವಮಾನ ಇಲಾಖೆ ಎಚ್ಚರಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


