ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕೆ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಜನವರಿ 22 ರಂದು ರಾಮಮಂದಿರ ಸಮರ್ಪಣಾ ಸಮಾರಂಭವನ್ನು ನಿಗದಿಪಡಿಸಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ನಿಂದ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮಾರಂಭಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ. ದೇವೇಗೌಡರಿಗೂ ಆಹ್ವಾನ ನೀಡಲಾಗಿದೆ. ಆದರೆ ಹಿರಿಯ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಪಕ್ಷ ನಾಯಕರಿಗೂ ಆಹ್ವಾನ ಕಳುಹಿಸಬಹುದು.
ವಿವಿಧ ಸಂಪ್ರದಾಯಗಳ ಗೌರವಾನ್ವಿತ ಸಂತರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ಸಮಾರಂಭದಲ್ಲಿ ಭಾಗವಹಿಸಲು ಸುಮಾರು 4000 ಸನ್ಯಾಸಿಗಳನ್ನು ಆಹ್ವಾನಿಸಲಾಗಿದೆ.


