ಲಖನೌ: ಶ್ರೀರಾಮ ಜನ್ಮಭೂಮಿ ಆವರಣದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ದೇಣಿಗೆ ಅಭಿಯಾನದಲ್ಲಿ ದೇವಾಲಯದ ಟ್ರಸ್ಟ್ ನ ಬೊಕ್ಕಸಕ್ಕೆ ಬರೋಬ್ಬರಿ 5,457 ಕೋಟಿ ರೂ. ಬಂದಿತ್ತು. ಆದರೆ ಅಖಿಲ ಭಾರತ ಮಟ್ಟದಲ್ಲಿ ದೇಣಿಗೆ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ತಂಡದ ತಾತ್ಕಾಲಿಕ ವರದಿಯು ಪ್ರಕಾರ 22 ಕೋಟಿ ಮೌಲ್ಯದ ಚೆಕ್‌ಗಳು ಬೌನ್ಸ್ ಆಗಿವೆ.
ಮತ್ತೊಂದೆಡೆ, ಟ್ರಸ್ಟ್ ಖಾತೆಗಳ ಜಿಲ್ಲಾವಾರು ಲೆಕ್ಕಪರಿಶೋಧನೆ ನಡೆಯುತ್ತಿರುವುದರಿಂದ ಇದುವರೆಗೆ ಸಂಗ್ರಹಿಸಲಾದ ಒಟ್ಟು ಮೊತ್ತದ ಅಂಕಿಅಂಶವು ತಾತ್ಕಾಲಿಕವಾಗಿದೆ. ಟ್ರಸ್ಟ್ ಮೂಲಗಳ ಪ್ರಕಾರ, ಬೌನ್ಸ್ ಆಗಿರುವ ಚೆಕ್‌ಗಳನ್ನು ಪ್ರತ್ಯೇಕಿಸಿ ಹೊಸ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಇನ್ನು ಚೆಕ್‌ಗಳು ಬೌನ್ಸ್ ಆದ ಕಾರಣ ತಿಳಿದುಕೊಳ್ಳಲು ಪರಿಶೀಲಿಸಲಾಗುತ್ತಿದೆ. ‘ತಾಂತ್ರಿಕ ಕಾರಣಗಳಿಂದಾಗಿ ಬೌನ್ಸ್ ಆಗಿರುವ ಚೆಕ್‌ಗಳನ್ನು ಸಂಬಂಧಪಟ್ಟ ಬ್ಯಾಂಕ್‌ನ ಒಪ್ಪಿಗೆ ಪಡೆದ ನಂತರ ಮತ್ತೆ ಪ್ರತಿನಿಧಿಸಲಾಗುತ್ತದೆ’ ಎಂದು ಟ್ರಸ್ಟ್‌ನ ಸದಸ್ಯರೊಬ್ಬರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz