ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಭಾರೀ ಅವಘಡ ಸಂಭವಿಸಿದ್ದು, ಮಧ್ಯ ಪ್ರದೇಶದ ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ.
ರಾಮನವಮಿ ಪ್ರಯುಕ್ತ ಹೆಚ್ಚಿನ ಜನರು ದೇವಸ್ಥಾನದಲ್ಲಿ ಸೇರಿದ್ದರು. ಜನರ ಭಾರ ಸಹಿಸಲು ಸಾಧ್ಯವಾಗದೇ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದಿದೆ ಎಂದು ಹೇಳಲಾಗಿದೆ.
ಬಾವಿಯ ಮೇಲ್ಭಾಗ ಕುಸಿದಿದ್ದು, ಪರಿಣಾಮವಾಗಿ ಮಕ್ಕಳು ಮಹಿಳೆಯರು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಕ ಭರದಿಂದ ಸಾಗಿದೆ.
ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


