ಪಾವಗಡ : ತಾಲೂಕಿನ ಕಸಬಾ ಹೋಬಳಿಯ ಕಿಲಾರ್ಲಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಹಾಗೂ ಉಪಾಧ್ಯಕ್ಷರಾಗಿ ಕೆ.ಬಿ. ನಾಗರಾಜಪ್ಪ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಸಂಘದ 13 ಸದಸ್ಯರ ಆಡಳಿತ ಮಂಡಳಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ರಾಮಚಂದ್ರ ಹೆಚ್. ಹಾಗೂ ಕೆ.ಬಿ. ನಾಗರಾಜಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಂಘದ ಕಾರ್ಯದರ್ಶಿ ರವಿಚಂದ್ರ ಕೆ.ಎಂ. ಘೋಷಿಸಿದರು.
ನೂತನ ಉಪಾಧ್ಯಕ್ಷ ಕೆ.ಬಿ. ನಾಗರಾಜಪ್ಪ ಮಾತನಾಡಿ, “ಅಧ್ಯಕ್ಷರು ಹಾಗೂ ನಿರ್ದೇಶಕರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಹಾಲು ಉತ್ಪಾದಕರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದರು.
ನಿರ್ದೇಶಕರಾದ ಜೆ. ನಾಗರಾಜಪ್ಪ, ತಿಮ್ಮರಾಜು, ನಾಗೇಂದ್ರಪ್ಪ, ಕೆ.ಟಿ. ನಾರಾಯಣಪ್ಪ, ರಂಗನಾಥ, ಚಿಕ್ಕೀರಪ್ಪ, ಬುಡ್ಡಪ್ಪ ಜಿ., ತೋಪಮ್ಮ, ನಾಗಮ್ಮ, ಹನುಮಂತನಾಯ್ಕ ಹಾಗೂ ಕಾಂತರಾಜು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸಂಘದ ನಿರ್ದೇಶಕರು ಹಾಗೂ ಹಾಲು ಉತ್ಪಾದಕರ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದ ಅಭಿವೃದ್ಧಿ ಹಾಗೂ ಹಾಲು ಉತ್ಪಾದಕರ ಹಿತಾಸಕ್ತಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತೇನೆ. ಸರ್ಕಾರ ಹಾಗೂ ಸಂಬಂಧಿಸಿದ ಸಂಸ್ಥೆಗಳಿಂದ ಹೆಚ್ಚಿನ ಅನುದಾನ ಪಡೆದು ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
— ರಾಮಚಂದ್ರ ಹೆಚ್. ನೂತನ ಅಧ್ಯಕ್ಷ.
ಸ್ಥಳೀಯ ಮುಖಂಡರಾದ ಡಿ.ಎನ್. ಸತ್ಯನಾರಾಯಣ, ಕೆ.ಎಂ. ಮೈಲಾರಪ್ಪ, ಜಂಪಣ್ಣ, ಅಂಜಿನಪ್ಪ, ರಂಗನಾಥಪ್ಪ, ಜಯರಾಮಪ್ಪ, ಕೃಷ್ಣ ನಾಯ್ಕ, ಚಿತ್ತಗಾನಹಳ್ಳಿ ಹನುಮಂತರಾಯಪ್ಪ, ಮಾರುತಿ, ನಾಗಭೂಷಣ್, ನಾಗರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
