nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ
    • ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ
    • ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!
    • ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?
    • ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    • ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    • ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರ ಕ್ಷೇತ್ರವನ್ನು ನಿಖಿಲ್ ಗೆ ಬಿಟ್ಟುಕೊಟ್ಟಿದ್ದೇನೆ: ಅನಿತಾ ಕುಮಾರಸ್ವಾಮಿ
    ರಾಜ್ಯ ಸುದ್ದಿ April 5, 2023

    ರಾಮನಗರ ಕ್ಷೇತ್ರವನ್ನು ನಿಖಿಲ್ ಗೆ ಬಿಟ್ಟುಕೊಟ್ಟಿದ್ದೇನೆ: ಅನಿತಾ ಕುಮಾರಸ್ವಾಮಿ

    By adminApril 5, 2023No Comments2 Mins Read
    anith kumaraswami

    ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಇಲ್ಲ ಎಂದು ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

    ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ರೀತಿಯಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ಟ್ವೀಟ್ ಮಾಡಿ ಅವರು ಪ್ರತಿಕ್ರಿಯಿಸಿದ್ದಾರೆ.

    ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ  ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

    2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದಿರುವ ಅವರು; ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಜೀವನ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

    ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು , ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.

    ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Comments are closed.

    Our Picks

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ತುಮಕೂರು : ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ‘ತುಮಕೂರು ಸ್ಕ್ವೇರ್’ ಎಂದು ಮರುನಾಮಕರಣ ಮಾಡುವ ಜಿಲ್ಲಾಡಳಿತದ ನಿರ್ಧಾರದ ಕುರಿತು…

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.