ರಾಮನಗರ: ಬಿಡದಿಯ ಭದ್ರಾಪುರ ಗ್ರಾಮದಲ್ಲಿ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಬಾಲಕಿ ತಾಯಿಗೆ ಧೈರ್ಯ ತುಂಬಿದ ಸಂಸದರು, ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ವರ್ಷದ ಬಾಲಕಿಯನ್ನ ಹತ್ಯೆ ಮಾಡಿರೋದು ವಿಕೃತಿ. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದು ಮರಣೋತ್ತರ ವರದಿ ಹಾಗೂ ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗವಾಗಬೇಕಿದೆ ಎಂದರು.
ಈಗಾಗಲೇ ಎರಡು–ಮೂರು ತಂಡಗಳ ರಚನೆ ಮಾಡಿಕೊಂಡು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಾಲಕಿ ಸಾವಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW