ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ತುಂಬಾಡಿ ಗ್ರಾ.ಪಂ ಅಧ್ಯಕ್ಷ ನಟರಾಜ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಲ್ಪಾವಧಿಗೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆಯಾಗಿದ್ದಾರೆ.
ಗ್ರಾ.ಪಂ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ತಾ.ಪಂ. ಇಓ ಅಪೂರ್ವ ಕಾರ್ಯನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಮತ್ತು ರಮೇಶ್ ಡಿ.ಆರ್. ನಾಮಪತ್ರ ಸಲ್ಲಿಸಿದ್ದು, ೧೬ ಮಂದಿ ಸದಸ್ಯರಲ್ಲಿ ರಮೇಶ್ ೧೦ ಮತ, ರಮೇಶ್ ಡಿ.ಆರ್. ೬ ಮತ ಪಡೆದಿದ್ದು, ಗ್ರಾ.ಪಂ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆಯಾಗಿದ್ದಾರೆ ಚುನಾವಣಾಧಿಕಾರಿ ಅಪೂರ್ವ ಅಧಿಕೃತ ಘೋಷಣೆ ಮಾಡಿದರು.
ಗ್ರಾ.ಪಂ. ನೂತನ ಅಧ್ಯಕ್ಷ ರಮೇಶ್ ಮಾತನಾಡಿ, ಗ್ರಾ.ಪಂ ಸದಸ್ಯರ ಬೆಂಬಲದಿಂದ ತುಂಬಾಡಿ ಗ್ರಾ.ಪಂ ನೂತನ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ, ಸದಸ್ಯರ, ಅಧಿಕಾರಿಗಳ ವಿಶ್ವಾಸದೊಂದಿಗೆ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ವ್ಯಕ್ತಿಗಳಿಗೆ ಸಿಗುವಂತೆ ಮಾಡುವ ಉದ್ದೇಶ ಹೊಂದಿದ್ದೇನೆ ಎಂದರು.
ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ನಟರಾಜ್ ಮಾತನಾಡಿ, ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗಿದೆ. ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಜಿ.ಪಂ ಸಿಇಓ ಜಿ.ಪ್ರಭು ಸರ್ ಅವರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನೂತನ ಅಧ್ಯಕ್ಷರು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ತಿಳಿಸಿ ಶುಭ ಹಾರೈಸಿದರು.
ಉಪಾಧ್ಯಕ್ಷೆ ಲತಾ ಮಾತನಾಡಿ, ಹಿಂದಿನ ಅಧ್ಯಕ್ಷರ ಜೊತೆಗೂಡಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ನೂತನ ಅಧ್ಯಕ್ಷರು ಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸಿ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ಸಿಗುವಂತೆ ಮಾಡಬೇಕಿದೆ. ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಓ ಪ್ರದೀಪ್‌ಕುಮಾರ್, ಸದಸ್ಯರಾದ ರಮೇಶ್ ಡಿ.ಆರ್, ಹರೀಶ್‌ಬಾಬು, ನಟರಾಜ್, ಪಾರ್ವತಮ್ಮ, ಪ್ರಸನ್ನಕುಮಾರ್, ಶಾರದ, ಕುಮಾರಿ, ಪ್ರಸನ್ನಕುಮಾರ್, ತಿಮ್ಮರಾಜಮ್ಮ, ಹೇಮಂತ್ ಕುಮಾರ್ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



