ಬೆಳಗಾವಿ: ಅಪೆಕ್ಸ್ ಬ್ಯಾಂಕ್ ನಿಂದ ಶಾಸಕ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪುರ ಸಹಿತ ಹಲವರು ಸಾಲ ಪಡೆದಿದ್ದು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದ ಸುಮಾರು 24 ಜನ ಅಪೆಕ್ಸ್ ಬ್ಯಾಂಕಿನಿಂದ ಸುಮಾರು ಆರು ಸಾವಿರ ಕೋಟಿ ರೂ. ವರೆಗೆ ಸಾಲ ಪಡೆದಿದ್ದಾರೆ. ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ. ಸಾಲ ಪಡೆದವರಿಗೆ ನೋಟಿಸ್ ನೀಡಲಾಗಿದೆ ಎಂದರು.
ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ. ಸಾಲ ಕಟ್ಟದವರ ಆಸ್ತಿ ಜಪ್ತಿ ಹೇಗೆ ಮಾಡಿಕೊಳ್ಳುತ್ತದೆಯೋ ಹಾಗೆಯೇ ಅಪೆಕ್ಸ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಧು ಇದೇ ವೇಳೆ ಅವರು ತಿಳಿಸಿದರು.
ಕೆಲವರು ಬಡ್ಡಿ ಮತ್ತು ಅಸಲನ್ನೂ ಕಟ್ಟಿಲ್ಲ ತುಮಕೂರು, ದಕ್ಷಿಣ ಕರ್ನಾಟಕ ಸೇರಿದಂತೆ ಡಿಸಿಸಿ ಬ್ಯಾಂಕುಗಳಿಂದ ಸಾಲ ಪಡೆದು ಮರುಪಾವತಿ ಮಾಡಿಲ್ಲ. ಯಾರ್ಯಾರು ಎಷ್ಟೆಷ್ಟು ಕೋಟಿ ಸಾಲ ಪಡೆದುಕೊಂಡಿದ್ದಾರೆ ಎನ್ನುವುದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸಚಿವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


