ಬೆಳಗಾವಿ: ಯಾರ್ರೀ ರಮೇಶ ಜಾರಕಿಹೊಳಿ? ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೂ ಇವರಿಗೂ ಏನು ಸಂಬಂಧ? ನಿಮ್ಮ ಗೋಕಾಕ ಕ್ಷೇತ್ರವನ್ನು ನೀವು ನೋಡಿಕೊಳ್ಳಿ. ಗ್ರಾಮೀಣ ಕ್ಷೇತ್ರದ ಶಾಸಕರು ಸಮರ್ಥರಿದ್ದಾರೆ. ಉತ್ತಮ ಕೆಲಸ ಮಾಡುತ್ತಿದ್ದಾರೆ. ಜನರ ವಿಶ್ವಾಸಗಳಿಸಿದ್ದಾರೆ. ಅವರ ಕ್ಷೇತ್ರವನ್ನು ಅವರು ನೋಡಿಕೊಳ್ಳುತ್ತಾರೆ ಎಂದು ಎಂಎಲ್.ಸಿ ಚನ್ನರಾಜ ಹಟ್ಟಿಹೊಳಿ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ನೀಡಿದ್ದಾರೆ.
ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ಯ ಹಮ್ಮಿಕೊಂಡಿದ್ದ ಪೂಜೆ ಮುಗಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿ ಮಾತಿಗೆ ಪ್ರತಿಕ್ರಿಸಿ ನೂರು ವರ್ಷದಿಂದ ಬೆಳಗಾವಿ ಗ್ರಾಮೀಣ ಜನರ ಕನಸಿತ್ತು. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣವಾಗಬೇಕೆನ್ನುವ ಕನಸು ಇಂದು ಈಡೇರಿದೆ ಎಂದರು.
ರಮೇಶ ಜಾರಕಿಹೊಳಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಏನು ಸಂಬಂಧ? ಗೋಕಾಕ ಕ್ಷೇತ್ರದ ಶಾಸಕರು ಅವರು, ಬೆಳಗಾವಿ ತಾಲೂಕಿಗೆ ಏನು ಸಂಬಂಧ? ಈ ಭಾಗದ ಶಾಸಕರು ಲಕ್ಷ್ಮೀ ಹೆಬ್ಬಾಳಕರ್, ಈ ಭಾಗದ ಬಗ್ಗೆ ವಿಚಾರ ಮಾಡಲು ಅವರಿಗೆ ಸಾಕಷ್ಟು ಜ್ಞಾನವಿದೆ. ನೀವು ಗೋಕಾಕದ್ದು ವಿಚಾರ ಮಾಡಿಕೊಳ್ಳಿ. ಇಲ್ಲಿ ಹಸ್ತಕ್ಷೇಪ ಮಾಡಲು ನಿಮಗೇನೂ ಹಕ್ಕಿಲ್ಲ. ನಿಮ್ಮ ಕ್ಷೇತ್ರದ ಬಗ್ಗೆ ವಿಚಾರ ಮಾಡಿಕೊಳ್ಳಿ ಎಂದು ಚನ್ನರಾಜ ಎಚ್ಚರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


