ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪೊಲೀಸರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ.
28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಕ್ಯಾಂಪ್ ಠಾಣೆಯ ಪಿಎಸ್‌ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಡೆತ್ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ. ಆದ್ರೆ, ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಕ್ಯಾಂಪ್ ಪಿಎಸ್‌ಐ ಸೇರಿ 1.50 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ. ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.
1.50 ಲಕ್ಷ ಹಣ ಪಡೆದಿದ್ದಲ್ಲೇ ಇನ್ನು ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ಸಾವಿಯೋ ನೇಣು ಬಿಗಿದುಕೊಂಡು ಪಿಳೈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy