ಕೋಲಾರ: ‘ಮೇಲ್ಮನೆ ಸದಸ್ಯರಾಗಲು ಕೆ.ಆರ್.ರಮೇಶ್ ಕುಮಾರ್ ಅತ್ಯಂತ ಸೂಕ್ತ ವ್ಯಕ್ತಿ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ನಮ್ಮ ಬೆಂಬಲವಿದೆ, ಉತ್ತಮ ಆಯ್ಕೆ ಕೂಡ. ನಾವೆಲ್ಲರೂ ಅವರನ್ನು ಸಮರ್ಥಿಸಿಕೊಳ್ಳುತ್ತೇವೆ’ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪರಿಷತ್ ಸದಸ್ಯ ಸ್ಥಾನವನ್ನು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕೇಳಿದರೂ ನಮ್ಮ ಒಪ್ಪಿಗೆ ಇದೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ’ ಎಂದರು.
ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಿಂದ ಬಂದಿದ್ದ ಕಾಂಗ್ರೆಸ್ ನಿಯೋಗ ಕೂಡ ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡಬೇಕೆಂದು ಸಚಿವರಿಗೆ ಹಕ್ಕೊತ್ತಾಯ ಮಂಡಿಸಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


