ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇಂದು ಮಧ್ಯಾಹ್ನ ಅವರು ನಿಧನರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಮೃತರು ಪತಿ, ಓರ್ವಳು ಮಗಳು, ಓರ್ವ ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


