ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA) ಪ್ರಕರಣ ದಾಖಲಿಸಿಕೊಂಡಿದೆ. ಘಟನೆ ಸಂಬಂಧ UAPA ಅಡಿ ಹೆಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣದ ಗಂಭೀರತೆ ಅರಿತು ಎನ್ ಐಎ ಪ್ರಕರಣ ದಾಖಲಿಸಿಕೊಂಡಿದೆ. ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಗೆ ನಿನ್ನೆ ಸಿಸಿಬಿ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದರು. ಸಿಸಿಬಿ ತನಿಖಾಧಿಕಾರಿ ನವೀನ್ ಕುಲಕರ್ಣಿ ಮತ್ತು ಟೀಂ, ರಾಮೇಶ್ವರಂ ಕೆಫೆ ಮ್ಯಾನೇಜರ್, ಸಿಬ್ಬಂದಿ ಸಮ್ಮುಖದಲ್ಲಿ ಮಹಜರು ನಡೆಸಿದ್ದರು. ಬಾಂಬರ್ ಎಂಟ್ರಿಯಾದ ಸ್ಥಳ, ಓಡಾಡಿದ್ದ ಸ್ಥಳದಲ್ಲಿ ಪರಿಶೀಲನೆ ಮಾಡಿದ್ದರು. ಜೊತೆಗೆ ಶಂಕಿತರನ್ನ ಆಡುಗೋಡಿ ಟೆಕ್ನಿಕಲ್ ಸೆಲ್ ಗೆ ಕರೆತಂದು ವಿಚಾರಣೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


