ಮಧುಗಿರಿ: ಪಟ್ಟಣದ ಏಕಶಿಲಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಕೋಟೆ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವದ ಅಂಗವಾಗಿ ಏ.17 ರ ಬುಧವಾರ ಬೆಳಿಗ್ಗೆ ಶ್ರೀ ಸ್ವಾಮಿ ಅವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ.
ಶ್ರೀ ರಾಮನವಮಿ ಅಂಗವಾಗಿ ಸಂಜೆ ಬೆಂಗಳೂರಿನ ಪ್ರಶಾಂತ ಭಾರ್ಗವ ಅವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಇರುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಸಕಾಲದಲ್ಲಿ ಭಾಗವಹಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವರ್ಣಾ ಅಲಂಕಾರ: ಮಧುಗಿರಿ ಪಟ್ಟಣದಲ್ಲಿರುವ ಸರ್ವ ಜನಾಂಗದ ಭಕ್ತಾದಿಗಳ ಸಹಕಾರದೊಂದಿಗೆ ದೇವಸ್ಥಾನದ ಗೋಪುರ, ಪ್ರಾಂಗಣ, ಒಳಭಾಗದಲ್ಲಿ ವರ್ಣ ಅಲಂಕಾರ ಮಾಡಿ ವಿಶೇಷ ಮೆರಗು ಬಂದಿದೆ.
ಬ್ರಹ್ಮರಥೋತ್ಸವ: ಮಧುಗಿರಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿಗೆ ಏಪ್ರಿಲ್ 17ರಿಂದ 20ರ ವರೆಗೂ ಬ್ರಹ್ಮರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಏ.8 ಗುರುವಾರ ರಂದು ಮಧ್ಯಾಹ್ನ 12:30ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ
ಬ್ರಹ್ಮರಥೋತ್ಸವ: ಮಧುಗಿರಿ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಪಾರ್ವತಿ ಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 19 ರಿಂದ 28ರ ವರೆಗೆ ನಡೆಯಲಿದ್ದು, ಏ.21ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಉತ್ತರ ನಕ್ಷತ್ರದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ
ಬ್ರಹ್ಮರಥೋತ್ಸವ: ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿ ಬಂದ್ರೆಹಳ್ಳಿ –ಮರವೇಕೆರೆ ತೇರಿನ ಬೀದಿಯಲ್ಲಿರುವ ಶ್ರೀ ಮೀನಗೊಂದಿ ಮಲೆ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಮತ್ತು ಜಾತ್ರಾ ಮಹೋತ್ಸವವು ಏಪ್ರಿಲ್ 22 ರಿಂದ 28ರ ವರೆಗೆ ನಡೆಯಲಿದ್ದು ,ಏಪ್ರಿಲ್ 24ರ ಗುರುವಾರ ಮಧ್ಯಾಹ್ನ 1:30ಕ್ಕೆ ಚೈತ್ರ ಬಹುಳ ಪ್ರತಿಶತ್ ಸ್ವಾತಿ ನಕ್ಷತ್ರದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296