ತುಮಕೂರು/ಮಧುಗಿರಿ: ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಕೊರಟಗೆರೆ ತಾಲ್ಲೂಕಿನಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಕೊರಟಗೆರೆಯ ಕ್ಯಾಮೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ತಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿರುವ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ನಾನು ಈ ಕ್ಷೇತ್ರದ ಮಗ ಚುನಾವಣೆ ನಂತರ ಕ್ಷೇತ್ರ ತೊರೆಯುವುದಿಲ್ಲ,ಕ್ಷೇತ್ರದಲ್ಲಿಯೇ ಇದ್ದು ಜನರ ಕಷ್ಟ ಸುಖ ಆಲಿಸುತ್ತೇನೆ,ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ,ಎಂತಹ ಸಂದರ್ಭದಲ್ಲಿಯೂ ನಿಮ್ಮ ಸೇವೆಗೆ ನಾನು ಸದಾ ಸಿದ್ದ ಎಂದರು.
ಇನ್ನೊಂದೆಡೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಡಿಸಿಎಂ ಪರಮೇಶ್ವರ್ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಛಾಪು ಮೂಡಿಸಲು ಹಗಲಿರುಳು ಪ್ರಚಾರ ಕೈಗೊಂಡಿದ್ದಾರೆ. ಮೂರು ಪಕ್ಷದ ಅಭ್ಯರ್ಥಿಗಳ ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದ್ದು, ಅಭ್ಯರ್ಥಿಗಳ ವೈಯಕ್ತಿಕ ವರ್ಚಸ್ಸು, ಪಕ್ಷದ ಪ್ರಭಾವದಿಂದ ಅಭ್ಯರ್ಥಿಗಳ ಗೆಲುವು ನಿರ್ಧಾರವಾಗಲಿದೆ ಎಂದು ವಿಶ್ಲೇಶಿಸಲಾಗುತ್ತಿದೆ.
ವರದಿ: ಅಬಿದ್ ಮಧುಗಿರಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700