ತುಮಕೂರು: ರಾಜ್ಯದ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುವ “ರನ್ನ ವೈಭವ–2025”ರ ಅಂಗವಾಗಿ ಫೆಬ್ರವರಿ 19 ರಿಂದ 22ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ರನ್ನ ರಥಯಾತ್ರೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 19ರಂದು ಮಧ್ಯಾಹ್ನ 1:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರನ್ನ ರಥಯಾತ್ರೆಯು ಆಗಮಿಸಲಿದೆ.
ಈ ರಥಯಾತ್ರೆಯನ್ನು ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವೀಕರಿಸಿ ಬೀಳ್ಕೊಡಲಾಗುವುದು. ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಸರ್ಕಾರಿ ನೌಕರರ ಸಂಘ, ಕನ್ನಡ ಪರ ಸಂಘ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4