16 ವರ್ಷದ ಬಾಲಕಿಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಹೈದರಾಬಾದ್ ನಲ್ಲಿ (Hyderabad) ನಡೆದಿದೆ.
ಹೈದರಾಬಾದ್ ನ ನಂದನವನಂ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರಾಚಕೊಂಡ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. POCSO ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಅಬೇದ್ ಬಿನ್ ಖಲೀದ್, ತಹಸೀನ್, ಮಂಕಾಳ ಮಹೇಶ್, ಎಂ ನರಸಿಂಗ್, ಅಶ್ರಫ್, ಫೈಝಲ್ ಮತ್ತು ಇಮ್ರಾನ್ ಎಂದು ಗುರುತಿಸಲಾಗಿದೆ.


