ಬೆಂಗಳೂರು: ಮೈಸೂರಿನ ಕೆ.ಆರ್.ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.
ಈ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ. ಮೈಸೂರಿನ ಕೆ.ಆರ್. ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು, ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರು ಹಾಕಿದರು. ಈ ತೀರ್ಪು ಬರ್ತಿದ್ದಂತೆ ಪ್ರಜ್ವಲ್ ರೇವಣ್ಣ ಕೋರ್ಟ್‌ನಲ್ಲೇ ಪ್ರಜ್ವಲ್ ರೇವಣ್ಣ ಬಿಕ್ಕಿ ಬಿಕ್ಕಿಅತ್ತರು.
ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಸಿಬ್ಬಂದಿ ಕೋರ್ಟ್ ಹಾಲ್ ನಿಂದ ಕರೆದೊಯ್ದರು. ಈ ವೇಳೆಯೂ ಜೋರಾಗಿ ಅಳುತ್ತಲೇ ಇದ್ದರು. ಕಣ್ಣೀರು ಒರೆಸುತ್ತಾ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಿಂದ ತೆರಳಿದರು. ಕೋರ್ಟ್ ಹಾಲ್ ಹೊರಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅವರನ್ನು ಸಂತೈಸುವ ಕೆಲಸ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC