ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿ ನಿಷಾಗೆ ನಗರದ ತ್ವರಿತ ವಿಶೇಷ ನ್ಯಾಯಾಲಯವು (ಎಫ್‌ಟಿಎಸ್ -4) ಜೀವಾವಧಿ ಶಿಕ್ಷೆ ವಿಧಿಸಿದೆ.
ಅಪರಾಧಿಯು 2018ರ ಫೆಬ್ರವರಿ 26ರಂದು ಮನೆಯ ಅಕ್ಕಪಕ್ಕ ಆಟವಾಡುತ್ತಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮಗುವಿನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಕೊತ್ತನೂರು ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಆತನನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.


