ತಮಿಳುನಾಡು: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.
ಇಬ್ಬರು ಬಾಲಕಿಯರು 13 ಮತ್ತು 17 ವರ್ಷ ವಯಸ್ಸಿನವರಾಗಿದ್ದು, 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ಸಂಬಂಧಿಕರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಬಾಲಕಿ ಶಾಲೆಯನ್ನು ತೊರೆದು ಕೆಲಸಕ್ಕಾಗಿ ಹುಡುಕುತ್ತಿದ್ದಾಗ 15 ವರ್ಷದ ಬಾಲಕ ಅವಳೊಂದಿಗೆ ಸ್ನೇಹ ಬೆಳೆಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆಕೆಗೆ ಕೆಲಸ ಕೊಡಿಸುವ ನೆಪದಲ್ಲಿ, 15 ವರ್ಷದ ಬಾಲಕ ಆಕೆಯನ್ನು ತನ್ನ ಇಬ್ಬರು ಸ್ನೇಹಿತರ ಬಳಿ ಕರೆದೊಯ್ದಿದ್ದಾನೆ, ಅವರು ಜನವರಿಯಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಬಾಲಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296