ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಪೊಲೀಸ್ ಆಯುಕ್ತ ವಿನಿತ್ ಗೋಯಲ್ ಅವರನ್ನು ಸುಳ್ಳುಪತ್ತೆ ಪರೀಕ್ಷೆಗೊಳಪಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮಮತಾ ಬ್ಯಾನರ್ಜಿ ರಕ್ಷಿಸುತ್ತಿದ್ದಾರೆ. ಪ್ರಕರಣದ ನ್ಯಾಯಯುತ ತನಿಖೆಯಾಗಬೇಕಾದರೆ ಸರ್ವಾಧಿಕಾರಿ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕಾರಿಯಾಗಿವೆ. ಸಂವಿಧಾನವನ್ನು ಚೂರು ಚೂರು ಮಾಡುವಂತಿದೆ. ಈ ದೇಶದಲ್ಲಿ ವೈದ್ಯರಿದ್ದರೆ ಅದು ಮಮತಾ ಬ್ಯಾನರ್ಜಿ ಒಬ್ಬರೇ ಎನ್ನುವಂತಿದೆ, ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಈ ಹಿಂದೆ ಆತ್ಮಹತ್ಯೆ ಎಂದು ಹೇಳಿರುವ ಪೊಲೀಸ್ ಆಯುಕ್ತ ವಿನಿತ್ ಗೋಯಲ್ ಈ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಸತ್ಯ ಹೊರಬರಬೇಕಾದರೆ ಮಮತಾ ಬ್ಯಾನರ್ಜಿ ಮತ್ತು ಪೊಲೀಸ್ ಆಯುಕ್ತ ವಿನಿತ್ ಗೋಯಲ್ ಅವರ ಸುಳ್ಳು ಪತ್ತೆ ಪರೀಕ್ಷೆಯನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q