ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಕರೆದು ಮಹಿಳೆಯೊಬ್ಬರ ಮೇಲೆ ಪೂಜಾರಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಸದ್ಯ ಬಾಗಲಗುಂಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್(39) ಬಂಧಿತ ಆರೋಪಿಯಾಗಿದ್ದಾನೆ.
ಕೆಲವು ದಿನಗಳ ಹಿಂದೆ ದೋಷ ನಿವಾರಣೆ ಮಾಡುವುದಾಗಿ ಮಹಿಳೆಯಿಂದ ಹಣಪಡೆದುಕೊಂಡಿದ್ದ ಪೂಜಾರಿ, ಮಹಿಳೆಯನ್ನು ಕರೆಸಿಕೊಂಡಿದ್ದು, ಬಳಿಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಮಹಿಳೆಯ ದೂರಿನ್ವಯ ಬಾಗಲಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇದೀಗ ಆರೋಪಿ ದಯಾನಂದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


