ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿ ಕಿರುಕುಳಕ್ಕೆ ಒಳಗಾದ ನಂತರವೂ ಪ್ರಕರಣ ದಾಖಲಿಸಲು ವಿಳಂಬ ಮಾಡಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಯುಪಿ ಜಲೌನ್ ನ ಅಕೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಎರಡು ತಿಂಗಳ ಹಿಂದೆ ಅಕೋಡಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲಾಗಿತ್ತು. ಘಟನೆಯ ಬಗ್ಗೆ ಮಗಳು ಪೋಷಕರಿಗೆ ತಿಳಿಸಿದ್ದು, ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ದೂರು ನೀಡಿ ಎರಡು ತಿಂಗಳು ಕಳೆದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ಕೋಪಗೊಂಡ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಜಲೌನ್ ಎಎಸ್ಪಿ ಅಸೀಮ್ ಚೌಧರಿ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. 24 ಗಂಟೆಯೊಳಗೆ ವರದಿ ಸಲ್ಲಿಸಬೇಕು. ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಸೀಮ್ ಚೌಧರಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


