ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ರಾತ್ರಿ 9.36 ಕೂಡ ರಾಷ್ಟ್ರ ಧ್ವಜವನ್ನು ಇಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.
ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್., ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ನೆನ್ನೆ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ತಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನೋದ ನವೀನ್ ಕುಮಾರ್ ರವರನ್ನು ಒಳಗೊಂಡ ಆಡಳಿತ ಜನಪ್ರತಿನಿಧಿಗಳನ್ನು ಸರ್ಕಾರ ಈ ಕೂಡಲೇ ಅಮಾನತು ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಸದರಿ ವ್ಯಕ್ತಿಗಳ ವಿರುದ್ಧ ರಾಷ್ಟ್ರದ್ರೋಹದಡಿಯಲ್ಲಿ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಬೃಹತ್ ಮಟ್ಟದ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.
ಒಕ್ಕೂಟ ಭಾರತ ಸರ್ಕಾರದ ಆದೇಶದಂತೆ ಸರ್ಕಾರಿ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನವೂ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಜೆ ಸೂರ್ಯಸ್ತವಾಗುವ ಒಳಗೆ ತ್ರಿವರ್ಣ ಧ್ವಜವನ್ನು ಧ್ವಜಸ್ತಂಭದಿಂದ ಗೌರವ ಪೂರ್ವಕವಾಗಿ ಇಳಿಸಬೇಕೆಂಬ ಆದೇಶವನ್ನು ಪಾಲಿಸದೆ, ಕಾನೂನು ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ ಕುಮಾರಿ ಮತ್ತು ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್ ಒತ್ತಾಯಿಸಿದ್ದಾರೆ.
ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾದಾಗ ಸಮಯ ಸುಮಾರು 9:30 ಆಗಿರುತ್ತದೆ. ಆದರೂ ಕೂಡ ರಾಷ್ಟ್ರಧ್ವಜವನ್ನು ಇಳಿಸದೆ, ಕಗ್ಗತ್ತಲಲ್ಲಿ ಹರಡುತ್ತಿದ್ದ ರಾಷ್ಟ್ರಧ್ವಜವನ್ನು ಕಂಡು ತಕ್ಷಣವೇ ತಾಲ್ಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ವಿಷಯವನ್ನು ಚರ್ಚಿಸಿದಾಗ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ರಾತ್ರಿ ಇಡಿ ರಾಷ್ಟ್ರಧ್ವಜ ರಕ್ಷಣೆಯನ್ನು ಮಾಡುವಂತೆ ಆದೇಶ ಮಾಡುತ್ತೇವೆ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಈ ಕೂಡಲೇ ಮುಂದಾಗುತ್ತೇವೆಂದು ತಿಳಿಸಿದ್ದಾರೆ.
ನಂತರ ಕೊರಟಗೆರೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ದೊಡ್ಡ ಸಿದ್ದಯ್ಯನವರಿಗೆ ದೂರವಾಣಿ ಮೂಲಕ ಸಮಯ ಸುಮಾರು 10 ಗಂಟೆಯಲ್ಲಿ ಕರೆ ಮಾಡಿ ವಿಚಾರದ ಬಗ್ಗೆ ಮಾಹಿತಿ ನೀಡಿದಾಗ, ದೊಡ್ಡಸಿದ್ದಯ್ಯ ಈ ಕೂಡಲೇ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡುತ್ತೇನೆಂದು, ಬೇಜವಾಬ್ದಾರಿತನದ ಉತ್ತರವನ್ನು ನೀಡುತ್ತಾರೆ. ನಂತರ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ರವರ ಗಮನಕ್ಕೆ ತರಲಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದು ರಾಷ್ಟ್ರ ಧ್ವಜವನ್ನು ಮಳೆಯಲ್ಲಿ ನೆನೆದಂತೆ ಬೆಳಕಿನ ವಾತಾವರಣದಲ್ಲಿ ರಕ್ಷಿಸುವಂತೆ ಪಂಚಾಯ್ತಿಯ ಸಿಬ್ಬಂದಿಯವರಿಗೆ ತಿಳಿಸಿರುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz