nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬೂದಗವಿ ಗ್ರಾಮ ಪಂಚಾಯಿತಿ: ಆಡಳಿತ ಮಂಡಳಿ ಅಮಾನತಿಗೆ ಒತ್ತಾಯ
    ಕೊರಟಗೆರೆ August 14, 2022

    ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬೂದಗವಿ ಗ್ರಾಮ ಪಂಚಾಯಿತಿ: ಆಡಳಿತ ಮಂಡಳಿ ಅಮಾನತಿಗೆ ಒತ್ತಾಯ

    By adminAugust 14, 2022No Comments2 Mins Read
    rashtradhwaja

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ರಾತ್ರಿ 9.36 ಕೂಡ ರಾಷ್ಟ್ರ ಧ್ವಜವನ್ನು ಇಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

    ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.,  ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ನೆನ್ನೆ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ತಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ.  ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನೋದ ನವೀನ್ ಕುಮಾರ್ ರವರನ್ನು ಒಳಗೊಂಡ ಆಡಳಿತ ಜನಪ್ರತಿನಿಧಿಗಳನ್ನು ಸರ್ಕಾರ ಈ ಕೂಡಲೇ ಅಮಾನತು ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಸದರಿ ವ್ಯಕ್ತಿಗಳ ವಿರುದ್ಧ ರಾಷ್ಟ್ರದ್ರೋಹದಡಿಯಲ್ಲಿ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಬೃಹತ್ ಮಟ್ಟದ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.


    Provided by
    Provided by

    ಒಕ್ಕೂಟ ಭಾರತ ಸರ್ಕಾರದ ಆದೇಶದಂತೆ ಸರ್ಕಾರಿ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನವೂ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಜೆ ಸೂರ್ಯಸ್ತವಾಗುವ ಒಳಗೆ ತ್ರಿವರ್ಣ ಧ್ವಜವನ್ನು ಧ್ವಜಸ್ತಂಭದಿಂದ ಗೌರವ ಪೂರ್ವಕವಾಗಿ ಇಳಿಸಬೇಕೆಂಬ ಆದೇಶವನ್ನು ಪಾಲಿಸದೆ, ಕಾನೂನು ಉಲ್ಲಂಘನೆ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ ಕುಮಾರಿ ಮತ್ತು ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್ ಒತ್ತಾಯಿಸಿದ್ದಾರೆ.

    ಕರ್ನಾಟಕ ರಣಧೀರರ ವೇದಿಕೆಯ ಕೊರಟಗೆರೆ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾದಾಗ  ಸಮಯ ಸುಮಾರು 9:30 ಆಗಿರುತ್ತದೆ. ಆದರೂ ಕೂಡ ರಾಷ್ಟ್ರಧ್ವಜವನ್ನು ಇಳಿಸದೆ, ಕಗ್ಗತ್ತಲಲ್ಲಿ ಹರಡುತ್ತಿದ್ದ ರಾಷ್ಟ್ರಧ್ವಜವನ್ನು ಕಂಡು ತಕ್ಷಣವೇ ತಾಲ್ಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ವಿಷಯವನ್ನು ಚರ್ಚಿಸಿದಾಗ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ರಾತ್ರಿ ಇಡಿ ರಾಷ್ಟ್ರಧ್ವಜ ರಕ್ಷಣೆಯನ್ನು ಮಾಡುವಂತೆ ಆದೇಶ ಮಾಡುತ್ತೇವೆ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಈ ಕೂಡಲೇ ಮುಂದಾಗುತ್ತೇವೆಂದು ತಿಳಿಸಿದ್ದಾರೆ.

    ನಂತರ ಕೊರಟಗೆರೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ದೊಡ್ಡ ಸಿದ್ದಯ್ಯನವರಿಗೆ ದೂರವಾಣಿ ಮೂಲಕ ಸಮಯ ಸುಮಾರು 10 ಗಂಟೆಯಲ್ಲಿ ಕರೆ ಮಾಡಿ ವಿಚಾರದ ಬಗ್ಗೆ ಮಾಹಿತಿ ನೀಡಿದಾಗ, ದೊಡ್ಡಸಿದ್ದಯ್ಯ ಈ ಕೂಡಲೇ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡುತ್ತೇನೆಂದು, ಬೇಜವಾಬ್ದಾರಿತನದ ಉತ್ತರವನ್ನು ನೀಡುತ್ತಾರೆ. ನಂತರ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ರವರ ಗಮನಕ್ಕೆ ತರಲಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದು ರಾಷ್ಟ್ರ ಧ್ವಜವನ್ನು ಮಳೆಯಲ್ಲಿ ನೆನೆದಂತೆ ಬೆಳಕಿನ ವಾತಾವರಣದಲ್ಲಿ ರಕ್ಷಿಸುವಂತೆ ಪಂಚಾಯ್ತಿಯ ಸಿಬ್ಬಂದಿಯವರಿಗೆ ತಿಳಿಸಿರುತ್ತಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.