ಹಿರಿಯೂರು: ಅಕ್ಟೋಬರ್ 2ರಂದು ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗಿತ್ತು.
ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕಿ ರಂಗಲಕ್ಷ್ಮಿ ಅವರು, ಮಹಾತ್ಮ ಗಾಂಧೀಜಿಯವರು ಒಬ್ಬ ಹುಟ್ಟು ಹೋರಾಟಗಾರರಾಗಿದ್ದರು. ಬ್ರಿಟೀಷ ವಿರುದ್ಧ ವಿದೇಶಿವಸ್ತುಗಳಿಗೆ ಬಹಿಷ್ಕಾರ, ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳುವಳಿ, ಆಮರಣ ಉಪವಾಸ ಮೊದಲಾದ ಹೋರಾಟದ ಕಿಚ್ಚು ಹಚ್ಚಿದ್ದರು. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ‘ ಅಂತರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸುತ್ತಿದೆ ಎಂದು ಅವರು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಇದೇ ವೇಳೆ ಮಾತನಾಡಿದ ರಂಗಲಕ್ಷ್ಮಿ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಒಂದು ಸದೃಢ ರಾಷ್ಟ್ರ ನಿರ್ಮಾಣದ ದಿಶೆಯಲ್ಲಿ, ಸ್ವಪೋಷಣೆ ಮತ್ತು ಸ್ವಾವಲಂಬನೆಗಳನ್ನು ಆಧಾರಸ್ತಂಭಗಳೆಂದು ಭಾವಿಸುವ ಅವಶ್ಯಕತೆಯನ್ನು ಮನಗಂಡು “ಜೈ ಜವಾನ್ ಜೈ ಕಿಸಾನ್”ಎಂಬ ಘೋಷವಾಕ್ಯವನ್ನು ಜನಪ್ರಿಯಗೊಳಿಸಿದವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಿಹಿ ಅಂಚುವುದರ ಮೂಲಕ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ದಿನದಂದು ಮಹಾನ್ ವ್ಯಕ್ತಿಗಳಿಗೆ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕ ವರ್ಗದವರೆಲ್ಲರೂ ಸಹ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


