ಮಂಡ್ಯ: ಜೆಡಿಎಸ್ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ.ಈ ಪಕ್ಷದಿಂದ ಬೆಳೆದು ಹೋದ ಕೆಲವರು ಜೆಡಿಎಸ್ ನ ಮುಗಿಸಿದ್ದೇವೆ ಎಂದು ಅಹಂನಲ್ಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸೋಮನಹಳ್ಳಿಯ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿವೆ. ಇದರಿಂದ ಮಂಗಳೂರಿನಲ್ಲಿ ಸರಣಿ ಹತ್ಯೆಯಾಗಿದೆ. ಸಿಎಂ ಸ್ಥಳದಲ್ಲಿದ್ದಾಗಲೇ ಮತ್ತೊಂದು ಹತ್ಯೆಯಾಗುತ್ತದೆ. ನಾನು ಅಧಿಕಾರದಲ್ಲಿದ್ದಾಗ ಎಂದೂ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದರು.
ಇನ್ನು ಯಾರೋ ಒಬ್ಬ ಎಂಪಿ ಹೇಳುತ್ತಾನೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು, ಮತ್ತೊಬ್ಬ ಮಾಜಿ ಸಿಎಂ ಈ ಸರ್ಕಾರಕ್ಕೆ ಮೊಟ್ಟೆಯಲ್ಲಿ ಹೊಡೆಯಬೇಕು ಅಂತಾರೆ. ಹೀಗೆ ಎರಡೂ ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz