ಹಾವೇರಿ : ನವೆಂಬರ್ 20 ರ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ನವೆಂಬರ್ 2ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ.
ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


