ವಿಜಯಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಖಾಸಿಂಸಾಬ್ ಹುಸೇನಸಾಬ್ ಬಿಜಾಪುರ(88) ನಿಧನರಾಗಿದ್ದಾರೆ.
ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಭಾನುವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದ ಜನಿಸಿದ್ದ ಕಾಹು 2003 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy