ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಚರಿಸಲಿರುವ ಪ್ರದೇಶದ ರಸ್ತೆಗಳ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಈ ಪ್ರಕ್ರಿಯೆಯು ಜನರಿಗೆ ಸಂಕಷ್ಟ ತಂದೊಡ್ಡಿದೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ರಸ್ತೆ, ಎಂಜಿ ರೋಡ್, ರೈಲ್ವೆ ನಿಲ್ದಾಣದ ರಸ್ತೆ, ಮೈಸೂರು ವಿವಿಗೆ ತೆರಳುವ ಮಾರ್ಗ, ಅರಮನೆ ಸುತ್ತಲಿನ ಮಾರ್ಗಗಳನ್ನು ಕಾಮಗಾರಿ ಮಾಡಲಾಗುತ್ತಿದೆ. ಆದರೆ ಈ ಕಾಮಗಾರಿ ಪ್ರಕ್ರಿಯೆಯಿಂದಾಗಿ ವಾಹನ ಸವಾರರರು ಸಂಕಷ್ಟ ಎದುರಿಸುತ್ತಿದ್ದಾರೆ.
ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಜೂನ್ 20ರಂದು ಆಗಮಿಸಲಿದ್ದಾರೆ. ಆದರೆ ಇದಕ್ಕೂ ಮುನ್ನ ಕೈಗೊಂಡಿರುವ ಕಾಮಗಾರಿ ಪ್ರಕ್ರಿಯೆಯು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಬದಲಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರೂ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಯೋಗ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


